April 11, 2025

ನೆಲ್ಯಾಡಿ : ಮದುವೆಗೆ ತೆರಳುತ್ತಿದ್ದ ಬಸ್ಸು ಹಾಗೂ ಕಂಟೈನರ್‌ ಮಧ್ಯೆ ಭೀಕರ ಅಪಘಾತ – 20 ಮಂದಿಗೆ ಗಾಯ

0

ನೆಲ್ಯಾಡಿ  : ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ  ಗಾಯಗೊಂಡ ಘಟನೆ ಏ.3 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ  ಉದನೆ ಎಂಬಲ್ಲಿ   ನಡೆದಿದೆ.
ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಫತ್ರೆಗೆ ದಾಖಲಿಸಲಾಗಿದೆ


ವರನ ಮದುವೆ ದಿಬ್ಬಣದ ಖಾಸಗಿ ಬಸ್ಸು ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ  ತೆರಳುತಿತ್ತು ಎನ್ನಲಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿ ಗಾಯಗೊಂಡು ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ರಕ್ಷಾಣ ಕಾರ್ಯಚರಣೆ ಮುಂದುವರಿದಿದೆ.

 

 

Leave a Reply

Your email address will not be published. Required fields are marked *

error: Content is protected !!