ಮಡಿಕೇರಿ: ಬಿಜೆಪಿ ಸಮಾವೇಶದಲ್ಲಿ ಹಲವರ ಪರ್ಸ್ ಕಳ್ಳತನ: 13 ಬಂಧನ ಬಂಧನ
ಕೊಡಗು: ಬಿಜೆಪಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯ ಸೇರಿದಂತೆ ಇತರೆ ನಾಯಕರ ಪರ್ಸ್ ಕಳ್ಳತನ ಮಾಡಿ ಪರಾರಿಯಾಗಿದ್ದ 13 ಆರೋಪಿಗಳು ಪೊಲೀಸರು ಬಂಧಿಸಿದ್ದಾರೆ.
ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಕುಶಾಲನಗರದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ಸಮಾವೇಶದಲ್ಲಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯ ಸೇರಿದಂತೆ ಇತರೆ ನಾಯಕರ ಪರ್ಸ್ ಕಳ್ಳತನ ಮಾಡಲಾಗಿತ್ತು.
ಈ ಸಂಬಂಧ ದೂರು ದಾಖಲಿಸಿಕೊಂಡು ಕಾರ್ಯಚರಣೆಗಿಳಿದಿದ್ದ ಕೊಡಗು ಜಿಲ್ಲಾ ಪೊಲೀಸರು ಒಟ್ಟು 13 ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಶಿವಮೊಗ್ಗ, ಭದ್ರಾವತಿ, ನೆಲಂಮಂಗಲ ಮೂಲದವರು ಎಂದು ತಿಳಿದುಬಂದಿದ್ದು, ಇವರಿಂದ ಎರಡು ಕಾರು, 12 ಮೊಬೈಲ್, 65,900 ರೂ. ನಗದು ಹಣ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.




