May 6, 2026

ಬರೋಬ್ಬರಿ 98 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ ಮಾಡಿದ ಅಧಿಕಾರಿಗಳು

0
image_editor_output_image2079769921-1712179174966.jpg

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತದ ವ್ಯಾಪ್ತಿಗೆ ಒಳಪಡುವ ನಂಜನಗೂಡು ತಾಲ್ಲೂಕಿನ ಹಿಮ್ಮಾವು ಗ್ರಾಮದ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಮೆ. ಯುನೈಟೆಡ್ ಬ್ರೀವರೀಸ್ ಲಿಮಿಟೆಡ್‌ನ ಘಟಕದ ಮೇಲೆ ಜಿಲ್ಲಾ ಅಬಕಾರಿ ಆಯುಕ್ತರು, ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರೊಂದಿಗೆ ಕಾರ್ಯಾಚರಣೆ ನಡೆಸಿ ಒಟ್ಟಾರೆ 98 ಕೋಟಿ 52 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಿ ಬ್ರೀವರಿ ಘಟಕದ ಮೇಲೆ ಪ್ರಕರಣವನ್ನು ದಾಖಲಿಸಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಬಂದ ಅನಾಮಧೇಯ ದೂರವಾಣಿ ಕರೆಯ ಮೇರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯವರು ನೀಡಿದ ಆದೇಶದನ್ವಯ ಬ್ರೀವರಿ ಘಟಕಕ್ಕೆ ಭೇಟಿ ನೀಡಿ ಘಟಕದ ದಾಖಲಾತಿಗಳಾದ ಲೆಕ್ಕದ ಪುಸ್ತಕದೊಂದಿಗೆ ಭೌತಿಕ ದಾಸ್ತಾನನ್ನು ಪರಿಶೀಲಿಸಿದಾಗ ಲೆಕ್ಕದ ಪುಸ್ತಕದ ದಾಸ್ತಾನಿಗಿಂತ 7 ಸಾವಿರ ವಿವಿಧ ಬ್ರಾಂಡಿನ ರಟ್ಟಿನ ಪೆಟ್ಟಿಗೆಗಳ ಬಿಯರ್ ದಾಸ್ತಾನು ಕೊಠಡಿಯಲ್ಲಿ ಹೆಚ್ಚಾಗಿ ಕಂಡುಬಂದಿದೆ.

Leave a Reply

Your email address will not be published. Required fields are marked *

error: Content is protected !!