March 17, 2026

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್. ಮಹಮ್ಮದ್ ನೇಮಕ

0
image_editor_output_image-1872461166-1712180208753.jpg

ವಿಟ್ಲ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಎಂ ಎಸ್ ಮಹಮ್ಮದ್ ಅವರು ನೇಮಕಗೊಂಡಿದ್ದಾರೆ.

ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಎಂ ಎಸ್ ಅವರು ದ.ಕ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿ. ಮೂರು ಸದಸ್ಯರಾಗಿ ಆಯ್ಕೆಯಾಗಿದ್ದರು.

ದ.ಕ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಜಿಲ್ಲಾ ಅಲ್ಪಾಸಂಖ್ಯಾತ ಘಟಕದ ಅಧ್ಯಕ್ಷರಾಗಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಕೆಪಿಸಿಸಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಸಮುದಾಯದ ಹಿರಿಯ ನಾಯಕರಾಗಿದ್ದು, ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದು, ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭಗೊಂಡಿತ್ತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಿಯೋಗಯೊಂದು ತೆರಳಿ ಮನವಿ ಸಲ್ಲಿಸಿತ್ತು.

Leave a Reply

Your email address will not be published. Required fields are marked *

You may have missed

error: Content is protected !!