ಕೇರಳ ಸ್ಟೋರಿ’ ಸಿನೆಮಾ ಪ್ರಸಾರ ಮಾಡದಂತೆ ಪಿಣರಾಯಿ ಸೂಚನೆ
ಕೇರಳ: ನೈಜ ಘಟನೆಯನ್ನು ಆಧರಿಸಿರುವ ‘ದಿ ಕೇರಳ ಸ್ಟೋರಿ’ ಸಿನೆಮಾ ದೇಶದಾದ್ಯಂತ ಸದ್ದು ಮಾಡಿತ್ತು. ಕೆಲವೊಂದು ಕಡೆ ಸಿನೆಮಾದ ಕುರಿತು ವಿರೋಧವು ವ್ಯಕ್ತವಾಗಿತ್ತು. ಇದೀಗ ದೂರರ್ಶನದಲ್ಲಿ ಎ.5ರಂದು ಪ್ರಸಾರವಾಗಲಿರುವ ‘ದಿ ಕೇರಳ ಸ್ಟೋರಿ’ ಮೂವಿಗೆ ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿರವರು ಪ್ರಸಾರ ಮಾಡದಂತೆ ಸೂಚನೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಇರುವುದರಿಂದ ಕೋಮು ಪ್ರಚೋದನೆಗೆ ಒಳಪಡಿಸುವಂತಹ ಸಿನೆಮಾಗಳನ್ನು ಪ್ರಸಾರ ಮಾಡುವುದು ಸರಿಯಲ್ಲ. ಇದರಿಂದ ಕೋಮು ಗಲಭೆ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಸಿನಿಮಾ ಪ್ರಸಾರದಿಂದ ಜನರಲ್ಲಿ ಕೋಮು ಉದ್ವಿಗ್ನತೆ ಉಲ್ಬಣಗೊಳ್ಳಬಹುದು. ಅಲ್ಲದೇ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಪ್ರಚಾರ ಯಂತ್ರ ಆಗಬೇಡಿ, ಈ ಸಿನಿಮಾ ಪ್ರಸಾರ ಮಾಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳಿ ಎಂದು ಡಿಡಿ ನ್ಯಾಷನಲ್ ಗೆ ಹೇಳಿದ್ದಾರೆ.
ಜನರ ಮನಸ್ಸಿನಲ್ಲಿ ದ್ವೇಷ ತುಂಬುವ ಇಂತಹ ಚಲನಚಿತ್ರಗಳ ಪ್ರದರ್ಶನ ಖಂಡನೀಯ, ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರದ ನಿರ್ಧಾರದಿಂದ ಹಿಂದೆ ಸರಿಯಿರಿ. ದ್ವೇಷ ಬಿತ್ತುವ ಇಂತಹ ದುರುದ್ದೇಶಪೂರಿತ ಪ್ರಯತ್ನಗಳನ್ನು ವಿರೋಧಿಸುವಲ್ಲಿ ಕೇರಳ ದೃಢವಾಗಿ ನಿಲ್ಲುತ್ತದೆ’ ಎಂದು ಸಿಎಂ ಪಿಣರಾಯಿ ವಿಜಯನ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.





