ಮಂಗಳೂರು: ಸೌಜನ್ಯಪರ ಹೋರಾಟ ಸಮಿತಿಯಿಂದ ಚುನಾವಣೆಯಲ್ಲಿ ನೋಟಾ ಅಭಿಯಾನ
ಮಂಗಳೂರು: ಸೌಜನ್ಯಪರ ಹೋರಾಟ ನಡೆಸುತ್ತಿರುವ ಸಮಿತಿ ಇದೀಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ ನೀಡಿದ್ದು, ಈ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸೌಜನ್ಯಪರ ಹೋರಾಟ ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ಕಳೆದ 11 ವರ್ಷಗಳಿಂದ ಸೌಜನ್ಯಗಳಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸಿದರು ಕೂಡ ಪ್ರಮುಖ ರಾಜಕೀಯ ಪಕ್ಷಗಳಿಂದ ಸ್ಪಂದನೆ ಸಿಗದ ಕಾರಣ ಈ ನೋಟಾ ಜಾಗೃತಿ ಅಭಿಯಾನ ಪ್ರಾರಂಭಿಸಲಾಗಿದೆ ಎಂದರು.




