May 6, 2026

ದ.ಕ. ಲೋಕಸಭಾ ಕ್ಷೇತ್ರದಲ್ಲಿ 10 ನಾಮಪತ್ರ ಕ್ರಮಬದ್ಧ

0
image_editor_output_image-1019608576-1712363177732.jpg

ಮಂಗಳೂರು: ಲೋಕಸಭೆಯ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪೂರ್ಣಗೊಂಡು, ಅವುಗಳ ಪರಿಶೀಲನೆ ಎಪ್ರಿಲ್ 5ರ ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ನಡೆಯಿತು.

ಬಹುಜನ್ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ, ಕರುನಾಡ ಸೇವಕ ಪಕ್ಷದ ಅಭ್ಯರ್ಥಿ ದುರ್ಗಾ ಪ್ರಸಾದ್, ಉತ್ತಮ ಪ್ರಜಾಕೀಯ ಪಾರ್ಟಿಯ ಅಭ್ಯರ್ಥಿ ಪ್ರಜಾಕೀಯ ಮನೋಹರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ರಂಜಿನಿ ಎಂ., ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ದೀಪಕ್ ರಾಜೇಶ್ ಕುವೆಲ್ಲೊ, ಮ್ಯಾಕ್ಸಿಮ್ ಪಿಂಟೋ, ಸತೀಶ್ ಬೂಡುಮಕ್ಕಿ ಹಾಗೂ ಸುಪ್ರೀತ್ ಕುಮಾರ್ ಪೂಜಾರಿ ಕಟೀಲು ಅವರ ನಾಮಪತ್ರಗಳು ಕ್ರಮಬದ್ದವಾಗಿವೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!