ಬಂಟ್ವಾಳ: ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ: ಇಬ್ಬರು ಗಂಭೀರ
ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೈಕ್ ಸವಾರ ಶರೋನ್ ಹಾಗೂ ಸಹಸವಾರ ಸೆಬಾಸ್ಟಿಯನ್ ಗಾಯಗೊಂಡವರು.
ಬಿಸಿರೋಡಿನಿಂದ ಮಂಗಳೂರು ನ ಕಡೆಗೆ ಹೋಗುತ್ತಿದ್ದ ವೇಳೆ ಕೈಕಂಬ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಲನೆಯಿಂದ ಬೈಕ್ ಹೆದ್ದಾರಿ ಬದಿಯಲ್ಲಿ ನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.
ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರು ಚಿಂತಾಜನಕ ಸ್ಥಿತಿಯನಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ






