December 15, 2025

ಮಂಗಳೂರು: ಹಂಚಿನ ಮನೆಗೆ ಬೆಂಕಿ ಲಕ್ಷಾಂತರ ರೂ. ನಷ್ಟ: ಅಪಾಯದಿಂದ ಪಾರಾದ ಐದು ಕುಟುಂಬಗಳು

0
image_editor_output_image-674176232-1712408019059

ಮಂಗಳೂರು: ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮವಾಗಿರುವ ಘಟನೆ ಮಂಗಳೂರು ನಗರದ ಬಂದರ್ ಜಿ ಎಂ ರಸ್ತೆಯಲ್ಲಿ ಶನಿವಾರ ನಡೆದಿದೆ.

ಶಂಸುದ್ದೀನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸುಮಾರು 10 ಲಕ್ಷ ಮೌಲ್ಯದ ಸೊತ್ತು ಹಾನಿಯಾಗಿರುವುದಾಗಿ ಅಂದಾಜಿಸಲಾಗಿದೆ.

ಈ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದು, ಅವರೆಲ್ಲೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿರಬಹುದು ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಮಂಗಳೂರು ಪಾಂಡೇಶ್ವರ ಅಗ್ನಿಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!