200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಪತ್ನಿಯನ್ನು ಕೊಲೆಮಾಡಿದ ಪತಿ
ಲಂಡನ್: 28 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನ ಚಾಕುವಿನಿಂದ ಹಿರಿದು ಕೊಂದಿರುವ ಘಟನೆ ಯುಕೆನ್ನು ಬೆಚ್ಚಿ ಬೀಳಿಸಿದೆ.
ಹತ್ಯೆಗೈದ ಬಳಿಕ ಆಕೆಯ ದೇಹವನ್ನು 200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ, ಒಂದು ವಾರ ಅಡುಗೆಮನೆಯಲ್ಲಿಟ್ಟು, ಬಳಿಕ ತನ್ನ ಸ್ನೇಹಿತನ ಸಹಾಯದಿಂದ ನದಿಗೆ ಎಸೆದಿದ್ದಾನೆ.
ಆರೋಪಿ ನಿಕೋಲಸ್ ಮೆಟ್ಸನ್ (28), ತನ್ನ ಪತ್ನಿ ಹಾಲಿ ಬ್ರಾಮ್ಲಿ (26)ಯನ್ನ ಕಳೆದ ಮಾರ್ಚ್ 26 ರಂದು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.