May 17, 2026

ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನು ಹತ್ಯೆಗೈದ ಪತಿ

0
image_editor_output_image-1853186074-1712533677401.jpg

ಬೆಂಗಳೂರು: ಸೀರೆಯಿಂದ ಕತ್ತು ಬಿಗಿದು ಪತಿ ಯಿಂದಲೇ ಪತ್ನಿಯನ್ನು ಹತ್ಯೆಗೈದಿರುವಂತಹ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೇತ್ರಾವತಿ ಮೃತ ಪತ್ನಿ. ನೇತ್ರಾವತಿಯನ್ನು ನಿನ್ನೆ ರಾತ್ರಿ ಹತ್ಯೆ ಮಾಡಿ ವೆಂಕಟೇಶ್ ಎಸ್ಕೇಪ್ ಆಗಿದ್ದಾರೆ. ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೆಂಕಟೇಶ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕ್ರೇನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಕುಡಿದು ಗಲಾಟೆ ಮಾಡುತ್ತಿದ್ದ. ನೇತ್ರಾವತಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು.

ಮಾಗಡಿಯ ಗೇರುಪುರ ಮೂಲದ ವೆಂಕಟೇಶ್ ದಂಪತಿ ನಾಲ್ಕು ವರ್ಷಗಳಿಂದ ಕಾಮಾಕ್ಷಿಪಾಳ್ಯದ ರಂಗನಾಥಪುರದಲ್ಲಿ ವಾಸವಾಗಿದ್ದರು.

Leave a Reply

Your email address will not be published. Required fields are marked *

error: Content is protected !!