ಕೊಟ್ಟಿಗೆಹಾರ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯ ಬಂಧನ
ಕೊಟ್ಟಿಗೆಹಾರ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಸಂಬಂಧ ಬಣಕಲ್ ಪೊಲೀಸರು ಕೋಳೂರು ಗ್ರಾಮದ ನಾರಾಯಣ ಎಂಬುವವನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.
ಬಾಲಕಿಯ ತಾಯಿ ಈ ಬಗ್ಗೆ ಬಣಕಲ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.





