March 23, 2026

ಮಡಿಕೇರಿ: ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ

0
image_editor_output_image1367685633-1712553355080.jpg

ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ಮೈಸೂರು- ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ.

ಘಟನೆಯಿಂದ ಕೆಲವು ಗಂಟೆಗಳ‌ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ರಸ್ತೆಯ ಎರಡೂ ಕಡೆಗಳಲ್ಲಿಯೂ ವಾಹನಗಳು ಸಾಲುಗಟ್ಟಿದ್ದವು. ತಕ್ಷಣ ಸ್ಥಳಕ್ಕೆ ಬಂದ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಮಗುಚಿದ್ದ ಬಸ್ಸನ್ನು ಬದಿಗೆ ಸರಿಸಿ ರಸ್ತೆಯ ಒಂದು‌ ಪಾರ್ಶ್ವದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Leave a Reply

Your email address will not be published. Required fields are marked *

error: Content is protected !!