ದೇವಸ್ಥಾನದಲ್ಲಿ ವಿಗ್ರಹ ಪ್ರತಿಷ್ಠಾಪನೆ ವಿಚಾರಕ್ಕೆ ಗಲಾಟೆ: ಎಸ್ಸೈ ಸೇರಿ 30ಕ್ಕೂ ಹೆಚ್ಚು ಮಂದಿಗೆ ಗಾಯ
ಬಳ್ಳಾರಿ: ದೇವಸ್ಥಾನದಲ್ಲಿ ವಿಗ್ರಹ ಪ್ರತಿಷ್ಠಾಪನೆ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ನಡೆದ ಗಲಾಟೆಯಲ್ಲಿ ಪಿಎಸ್‍ಐ ಸೇರಿ 30ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
ಕೆಲವು ತಿಂಗಳ ಹಿಂದೆ ಎರ್ರೆಪ್ಪಸ್ವಾಮಿ ಮೂರ್ತಿಯನ್ನು ಎಸ್‍ಸಿ ಸಮುದಾಯದವರು ಪ್ರತಿಷ್ಠಾಪಿಸಿದ್ದರು. ಇದೀಗ ಕುರುಬ ಸಮುದಾಯದವರಿಂದ ಮೂರ್ತಿ ಪ್ರತಿಷ್ಠಾಪಿಸಲು ಮುಂದಾದಾಗ ಈ ಗಲಾಟೆ ನಡೆದಿದೆ. ಮಠದ ಮೂಲ ಸ್ವಾಮಿ ಎರ್ರಿಸ್ವಾಮಿ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು, ಈಗ ಎಸ್‍ಸಿ ಸಮುದಾಯಕ್ಕೆ ಸೇರಿದ ಎರ್ರೆಪ್ಪಸ್ವಾಮಿ ಮೂರ್ತಿ ಪ್ರತಿಷ್ಠಾಪಿಸಲು ಮುಂದಾಗಿದ್ದಾರೆ ಎನ್ನುವ ವಿಚಾರಕ್ಕೆ ಗಲಾಟೆಯಾಗಿದೆ. ಈ ವೇಳೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ ಪರಿಣಾಮ ಪೊಲೀಸರು ಸೇರಿದಂತೆ 30 ಮಂದಿ ಗಾಯಗೊಂಡಿದ್ದಾರೆ.





