February 4, 2026

ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ

0
image_editor_output_image452366878-1712648523752.jpg

ಹೈದರಾಬಾದ್: ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023 ರಲ್ಲಿ ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್‌ನ 25 ವರ್ಷದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿರುವುದಾಗಿ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಮಂಗಳವಾರ ತಿಳಿಸಿದೆ.

ಮೊಹಮ್ಮದ್ ಅಬ್ದುಲ್ ಅರ್ಫಾತ್ ಸುಮಾರು ಮೂರು ವಾರಗಳಿಂದ ನಾಪತ್ತೆಯಾಗಿದ್ದ. ದೂತಾವಾಸ ಕಚೇರಿ ಅಬ್ದುಲ್ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಪತ್ತೆಹಚ್ಚಲು ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಈ ಹಿಂದೆ ತಿಳಿಸಿತ್ತು. ಮಂಗಳವಾರ ಬೆಳಗ್ಗೆ ಅವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!