May 6, 2026

ಕುಂದಾಪುರ: ಇನ್ನೋವಾ ಕಾರು ಡಿವೈಡರ್‌ಗೆ ಢಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ

0
image_editor_output_image1150340274-1712710033073.jpg

ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಸಂಭವಿಸಿದೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ದರ್ಶನ ಮುಗಿಸಿ ಪಾಂಡಿಚೇರಿಗೆ ಮರಳುತ್ತಿದ್ದ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು.

ಢಿಕ್ಕಿಯ ರಭಸಕ್ಕೆ ಕಬ್ಬಿಣದ ಗ್ರಿಲ್‌ಗಳಿಗೂ ಹಾನಿಯಾಗಿದ್ದು, ಗಾಯಾಳುಗಳ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅವಘಡ ನಡೆದ ವೇಳೆ ಅದೃಷ್ಟವಶಾತ್ ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!