May 6, 2026

ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ತಾಯಿ

0
image_editor_output_image966759887-1712816578508.jpg

ಬೆಂಗಳೂರು: ಪಾಪಿ ತಾಯಿಯೊಬ್ಬಳು ಮಕ್ಕಳಿಬ್ಬರನ್ನು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಮೃತ ಮಕ್ಕಳನ್ನು ಲಕ್ಷ್ಮಿ (7) ಮತ್ತು ಗೌತಮ್ (9) ಎಂದು ಗುರುತಿಸಲಾಗಿದೆ. ಇವರನ್ನು ತಾಯಿ ಗಂಗಾದೇವಿ ಕೊಲೆ ಮಾಡಿದ್ದಾಳೆ. ಈ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಇಬ್ಬರು ಮಕ್ಕಳನ್ನು ತಾಯಿ ಕೊಲೆ ಮಾಡಿದ್ದಾಳೆ. ಬಳಿಕ ಕಂಟ್ರೋಲ್ ರೂಂಗೆ ಕರೆ ಮಾಡಿ ಮಕ್ಕಳನ್ನ ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ. ಕೂಡಲೇ ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಗಂಗಾದೇವಿಯನ್ನ ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!