March 17, 2026

ಮಂಗಳೂರು: ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ: ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣೆ

0
image_editor_output_image1168433145-1712898869494

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ

ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ.

ಸಂಜೆ 5 ಗಂಟೆ ಸುಮಾರಿಗೆ ಟ್ರೆಸ್ಸಿ ಬಾವಿಯಿಂದ ನೀರು ಸೇದುತ್ತಿದ್ದಾಗ ತಲೆ ಸುತ್ತಿ ಬಾವಿಗೆ ಬಿದ್ದಿದ್ದಾರೆ. ಕೂಡಲೇ ಆಕೆಯ ಕುಟುಂಬಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಧಾವಿಸಿ ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ.

ಬಾವಿಯಲ್ಲಿ ಎಂಟು ಅಡಿಗೂ ಹೆಚ್ಚು ನೀರು ಇತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ನೀಡಿದ ಮಾಹಿತಿಯಂತೆ ಬಾವಿಯಲ್ಲಿದ್ದ ಪಂಪ್‌ಗೆ ಅಳವಡಿಸಿದ್ದ ಹಗ್ಗವನ್ನು ಮಹಿಳೆ ಹಿಡಿದಿದ್ದಾರೆ.

ಕಾರ್ಯಾಚರಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜೀವ, ಮುಖ್ಯ ಅಗ್ನಿಶಾಮಕ ದಳದ ಅಧಿಕಾರಿ ಚಂದ್ರಹಾಸ ಸಾಲಿಯಾನ್, ಸಿಬ್ಬಂದಿಗಳಾದ ದಯಾಕರ, ಪುನೀತ್, ಶಿವರಾಜ್, ಪವನ್ ಕುಮಾರ್ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!