May 6, 2026

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

0
1000003714

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಬಂಧಿತ ಆರೋಪಿಗಳನ್ನು ಮುಸವಿರ್ ಹುಸೇನ್ ಶಾಜಿಬ್ ಹಾಗೂ ಮತೀನ್ ತಾಹಾ ಎಂದು ಮೂಲಗಳು ತಿಳಿಸಿವೆ.

ನಗರದ ಎಚ್‍ಎಎಲ್ ವ್ಯಾಪ್ತಿಯಲ್ಲಿರುವ ಬ್ರೂಕ್ ಫೀಲ್ಡ್ ಕುಂದಲನಹಳ್ಳಿ ಮುಖ್ಯರಸ್ತೆಯ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ಮಾರ್ಚ್‌ 1 ರಂದು ಬಾಂಬ್ ಸ್ಪೋಟ ನಡೆದಿದ್ದು, 9 ಮಂದಿ ಗಾಯಗೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿತ್ತು.

Leave a Reply

Your email address will not be published. Required fields are marked *

error: Content is protected !!