May 6, 2026

ಫ್ಲೈಓವರ್ ಮೇಲಿನಿಂದ ಜಿಗಿದು ಗುತ್ತಿಗೆ ನೌಕರ ಆತ್ಮಹತ್ಯೆ

0
image_editor_output_image919191102-1712912236774.jpg

ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತನ್ನ ಬೈಕನ್ನ ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಕಳೆದ 3-4 ತಿಂಗಳಿನಿಂದ ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದಾನೆ. ಬಳಿಕ ಬೈಕ್ ಪಾರ್ಕ್ ಮಾಡಿ, ಫ್ಲೈಓವರ್‌ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!