May 6, 2026

ಕುಂದಾಪುರ: ರೆಸಾರ್ಟ್ ನ ಸ್ವೀಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬಾಲಕ ಸಾವು

0
image_editor_output_image943512380-1712912460813.jpg

ಕುಂದಾಪುರ: ಎನ್ವೆಂಚರ್ಸ್ ರೆಸಾರ್ಟ್ ನ ಸ್ವೀಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್ ನಲ್ಲಿ ನಡೆದಿದೆ.

ಹೂಡೆ ಮೂಲದ ಮುಹಮ್ಮದ್ ಅರೀಝ್ (10) ಮೃತ ಬಾಲಕ. ಅಝೀಝ್ ಹೂಡೆಯ ದಾರುಸ್ಸಲಾಮ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ. ಈ ವೇಳೆ ಬಾಲಕ ರೆಸಾರ್ಟ್ ನ ಈಜುಕೊಳದ ನೀರಿಗೆ ಬಿದ್ದಿದ್ದಾನೆ.

ಪರಿಣಾಮ ಚಿಂತಾಜನಕ ಸ್ಥಿತಿಯಲ್ಲಿದ್ದ ಅರೀಝ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಾಲಕ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಇನ್ನು, ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್ ವಿರುದ್ಧ ಪೋಷಕರು ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!