ಬೊಂಡ ಫ್ಯಾಕ್ಟರಿ ಬಂದ್ ಗೆ ಕಾರಣ ತಿಳಿಸಿದ್ದು ಹೀಗೆ…
ಮಂಗಳೂರು: ಅಡ್ಯಾರ್ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ಸುಮಾರು 137 ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರು ಬೊಂಡ ಫ್ಯಾಕ್ಟರಿಗೆ ಬೀಗ ಹಾಕಿದ್ದಾರೆ.
ಆದರೆ, ತಾಂತ್ರಿಕ ಕಾರಣಗಳಿಂದ ಬೊಂಡ ಫ್ಯಾಕ್ಟರಿ ಬಂದ್ ಮಾಡಲಾಗಿದೆ ದಯವಿಟ್ಟು ಸಹಕರಿಸಿ ಎಂದು ಸಂಸ್ಥೆ ಹೇಳಿದೆ.
ಆದರೆ, ತಾಂತ್ರಿಕ ಕಾರಣಗಳಿಂದ ಬೊಂಡ ಫ್ಯಾಕ್ಟರಿ ಬಂದ್ ಮಾಡಲಾಗಿದೆ ದಯವಿಟ್ಟು ಸಹಕರಿಸಿ ಎಂದು ಸಂಸ್ಥೆ ಹೇಳಿದೆ.
ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಎ.8ರಂದು ಬೊಂಡ ನೀರು ಖರೀದಿಸಿ ಮನೆಗೆ ಕೊಂಡು ಹೋಗಿದ್ದರು ಎನ್ನಲಾಗಿದೆ. ಬೊಂಡ ನೀರು ಸೇವಿಸಿದ 137 ಮಂದಿ ಮರುದಿನ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.
ಅಸ್ವಸ್ಥಗೊಂಡವರು ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರೋಡ್ ಪರ್ಲಿಯ ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆ, ಮಂಗಳೂರು ನಗರದ ಹೈಲ್ಯಾಂಡ್, ಯುನಿಟಿ, ಕನಚೂರ್, ಯನಪೋಯ, ಇಂಡಿಯಾನ, ಕೊಲಾಸೊ ಹಾಗೆಯೇ ಇನ್ನಿತರ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಇವರನ್ನು ಆರೋಗ್ಯ ಅಧಿಕಾರಿಗಳ ತಂಡ ಭೇಟಿಯಾಗಿ ಅವರಿಂದ ಮಾಹಿತಿ ಪಡೆದಿದ್ದಾರೆ.




