May 6, 2026

ಬೈಕ್‌, ಕಾರಿನ ಮಧ್ಯೆ ಅಪಘಾತ: ಕಾರಾಗೃಹದ ಸಿಬ್ಬಂದಿ ಸ್ಥಳದಲ್ಲೇ ಸಾವು

0
image_editor_output_image1352516798-1712988386777.jpg

ಧಾರವಾಡ : ಬೈಕ್‌ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿ ಧಾರವಾಡ ಕೇಂದ್ರ ಕಾರಾಗೃಹದ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದ ರಸ್ತೆ ಮಧ್ಯೆ ಏ.12ರ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ರುದ್ರಪ್ಪ ಸಿದ್ದಣ್ಣವರ ಅಪಘಾತದಲ್ಲಿ ಸಾವನ್ನಪ್ಪಿದವರು.

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಪೊಲೀಸ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರುದ್ರಪ್ಪ, ಶುಕ್ರವಾರ ರಾತ್ರಿ ಕರ್ತವ್ಯ ಮುಗಿಸಿ ವಾಪಸ್ ಮನೆ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ರುದ್ರಪ್ಪ ಅವರ ತಲೆಗೆ ಬಲವಾದ ಪೆಟ್ಟು ಬಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!