ಬೈಕಿಗೆ ಕಾರು ಢಿಕ್ಕಿ: ಒಂದೇ ಕುಟುಂಬದ ಮೂವರು ಮೃತ್ಯು
ಗ್ರೇಟರ್ ನೋಯ್ಡಾ: ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸಹೋದರ ಹಾಗೂ ಇಬ್ಬರು ಸಹೋದರಿಯರು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಶುಕ್ರವಾರ (ಏ.12 ರಂದು) ಪರಿ ಚೌಕ್ ರಸ್ತೆಯಲ್ಲಿ ಮಧ್ಯರಾತ್ರಿ 2:30 ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಸುರೇಂದ್ರ ಸಿಂಗ್ (28) ಅವರ ಸಹೋದರಿ ಶೈಲಿ (26) ಅಂಶು (14) ಮೃತ ದುರ್ಧೈವಿಗಳು. ಅಂಶು ಅವರ ಸ್ನೇಹಿತೆ ಸಿಮ್ಮಿ ಗಂಭೀರ ಗಾಯಗೊಂಡಿದ್ದಾರೆ.
ಸುರೇಂದ್ರ ಸಿಂಗ್ ಸೇರಿದಂತೆ ನಾಲ್ವರು ತಮ್ಮ ಸ್ಪ್ಲೆಂಡರ್ ಬೈಕ್‌ನಲ್ಲಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ವಾಪಾಸಾಗುತ್ತಿದ್ದರು. ಈ ವೇಳೆ ಅಪರಿಚಿತ ಕಾರೊಂದು ಅವರ ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ನೆಲಕ್ಕುರುಳಿದವರ ಮೇಲೆ ಕಾರು ಹರಿದು ಪರಾರಿ ಆಗಿದೆ.
ಸುರೇಂದ್ರ ಹಾಗೂ ಆತನ ಇಬ್ಬರು ಸಹೋದರಿಯರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿಮ್ಮಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.




