May 6, 2026

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಮಾಂಸದೂಟವನ್ನು ರಸ್ತೆಗೆ ಬಿಸಾಡಿದ ಅಧಿಕಾರಿಗಳು

0
image_editor_output_image1793998274-1713038713260.jpg

ಹಾಸನ: ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದಲ್ಲಿ ಆಹಾರ ಪದಾರ್ಥಗಳನ್ನು ರಸ್ತೆಗೆ ಚೆಲ್ಲಿರುವುದರ ವಿರುದ್ಧ ತೀವ್ರ ಆಕ್ರೋಶ ಕೇಳಿಬಂದಿದೆ.

ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಇಂದು ಹೊಳೆನರಸೀಪುರ ತಾಲೂಕಿನಲ್ಲಿ ಪ್ರಚಾರ ಕಾರ್ಯ ನಡೆಸಲು ಕಾರ್ಯಕ್ರಮ ನಿಗದಿಯಾಗಿತ್ತು.

ಇದೇ ವೇಳೆ ಕೋಡಿಹಳ್ಳಿ ಗ್ರಾಮದ ಮುಖಂಡರೊಬ್ಬರ ಹುಟ್ಟುಹಬ್ಬದ ಅಂಗವಾಗಿ ಭೋಜನಕೂಟದ ಆಯೋಜನೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದಾಗಿ ಮಾಂಸದೂಟಕ್ಕೆ ಅವಕಾಶ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ, ಚುನಾವಣಾ ಕರ್ತವ್ಯದಲ್ಲಿ ನಿಯೋಜನೆಗೊಂಡಿದ್ದ ಫ್ಲೈಯಿಂಗ್ ಸ್ಕ್ವಾಡ್ ತಯಾರಿಸಲಾಗಿದ್ದ ಆಹಾರ ಪದಾರ್ಥಗಳನ್ನು ವಶಕ್ಕೆ ತೆಗೆದುಕೊಂಡಿದೆ. ಬಳಿಕ ಅದನ್ನು ರಸ್ತೆಗೆ ಬಿಸಾಡಿ ಅಧಿಕಾರಿಗಳು ತೆರಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!