May 6, 2026

ಮೀನು ಹಿಡಿಯುವ ವಿಚಾರದಲ್ಲಿ ಗಲಾಟೆ: ಓರ್ವ ಯುವಕನ‌ ಕೊಲೆಯಲ್ಲಿ ಅಂತ್ಯ

0
image_editor_output_image-1705632897-1713038962575.jpg

ಕೋಲಾರ: ಮೀನು ಹಿಡಿಯುವ ವಿಚಾರದಲ್ಲಿ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದಿದ್ದು, ಈ ಕುರಿತು ನ್ಯಾಯ ಪಂಚಾಯಿತಿ ವೇಳೆ ಚಾಕುವಿನಿಂದ ಇರಿದು ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನಡೆದಿದೆ.

ಲೋಕೇಶ್, ಕೊಲೆಯಾದ ಯುವಕ. ಮತ್ತೋರ್ವ ದರ್ಶನ್‌ಗೆ ಗಂಭೀರ ಗಾಯವಾಗಿದ್ದು, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟೇಕಲ್‌ನ ಈಶ್ವರ ಕೆರೆಯಲ್ಲಿ ಮೀನು ಹಿಡಿಯುವಾಗ ಗಲಾಟೆ ನಡೆದಿತ್ತು. ಈ ಹಿನ್ನಲೆ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ನಡೆಸಲಾಗುತ್ತಿತ್ತು. ಈ ವೇಳೆ ಸಹೋದರ ಸಂಬಂಧಿ ಪ್ರಮೋದ್‌ ಎಂಬಾತ ರೊಚ್ಚಿಗೆದ್ದು ಚಾಕುವಿನಿಂದ ತಿವಿದಿದ್ದಾನೆ.

ಕೂಡಲೇ ಗಾಯಾಳು ಲೋಕೇಶ್ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಮತ್ತೊಬ್ಬ ಗಾಯಾಳು ದರ್ಶನ್‌ಗೆ ಚಿಕಿತ್ಸೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಕೋಲಾರ ಎಸ್‌ಪಿ ನಾರಾಯಣ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!