September 20, 2024

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ:
ಪತಿ, ಪತ್ನಿ, ಇಬ್ಬರು ಮಕ್ಕಳು ಮೃತ್ಯು

0

ಮಂಗಳೂರು: ನಗರದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

ಮಾರ್ಗನ್ಸ್ ಗೇಟ್ ಬಳಿಯ ಮಾರ್ಗನ್ಸ್ ಸ್ಟ್ರೀಟ್ ನ ಮನೆಯೊಂದರಲ್ಲಿ ಇಬ್ಬರು ಮಕ್ಕಳ ಸಹಿತ ದಂಪತಿಯ ಮೃತದೇಹಗಳು ಪತ್ತೆಯಾಗಿವೆ. ಮೃತರನ್ನು ನಾಗೇಶ್ ಶೇರಿಗುಪ್ಪಿ(30), ಅವರ ಪತ್ನಿ ವಿಜಯಲಕ್ಷ್ಮೀ(26), ಮಕ್ಕಳಾದ ಸಪ್ನಾ(8) ಹಾಗೂ ಸಮಂತ್(4) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬಾಗಲಕೋಟೆ ಬೀಳಗಿ ನಿವಾಸಿಗಳೆನ್ನಲಾಗಿದೆ.

ತಾಯಿ ಮತ್ತು ಇಬ್ಬರು ಮಕ್ಕಳು ವಿಷ ಸೇವನೆಯಿಂದ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದರೆ, ತಂದೆ ಮೃತದೇಹ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿದೆ.

ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ

Leave a Reply

Your email address will not be published. Required fields are marked *

error: Content is protected !!