ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ: ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ಪತಿ
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಘಟನೆ ನಗರದ ಹೆಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗಿರಿಜಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ನವೀನ್ ಹತ್ಯೆಗೈದ ಆರೋಪಿಯಾಗಿದ್ದಾನೆ. ಪತಿ ಹಾಗೂ ಪತ್ನಿಯ ನಡುವೆ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.
ಇದೇ ಕಾರಣಕ್ಕೆ ಮಹಿಳೆ ಮಲಗಿದ್ದ ವೇಳೆ ಆರೋಪಿ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.





