February 4, 2026

ರಸ್ತೆ ಅಪಘಾತ: ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸಹಿತ 7 ಮಂದಿ ಸಜೀವ ದಹನ

0
image_editor_output_image-332872437-1713161090390.jpg

ರಾಜಸ್ಥಾನ: ಟ್ರಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕೂಡಲೇ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.

ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಎಲ್‌ಪಿಜಿ ಕಿಟ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಟ್ರಕ್‌ನಲ್ಲಿ ತುಂಬಿದ್ದ ಹತ್ತಿ ಬೆಂಕಿಯನ್ನು ಮತ್ತಷ್ಟು ಹೆಚ್ಚಿಸಿತ್ತು. ಅಲ್ಲಿದ್ದವರು ಹರಸಾಹಸ ಮಾಡಿದರೂ ಬೆಂಕಿಯ ರಭಸಕ್ಕೆ ಕಾರು ಪ್ರಯಾಣಿಕರು ಬೀಗ ಹಾಕಿದ್ದ ಬಾಗಿಲು ತೆರೆಯಲು ಸಾಧ್ಯವಾಗದೆ ಸಜೀವ ದಹನವಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!