February 4, 2026

ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

0
image_editor_output_image-1472281602-1713240850928

ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ನಿವಾಸದ ಮೇಲೆ ಗುಂಡಿನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಅಪರಾಧ ವಿಭಾಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸೋಮವಾರ (ಏ.15 ರಂದು) ಗುಜರಾತ್‌ನ ಭುಜ್ ನಲ್ಲಿ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಮಸಿಹಿ ಮೂಲದ ವಿಕ್ಕಿ ಸಾಹಬ್ ಗುಪ್ತಾ (24) ಮತ್ತು ಸಾಗರ್ ಶ್ರೀಜೋಗೇಂದ್ರ ಪಾಲ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತರಲಾಗುವುದು ಎಂದು ಮೂಲಗಳು ಹೇಳಿರುವುದಾಗಿ ವರದಿಯಾಗಿದೆ.
ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಗುಂಡಿನ ದಾಳಿ ನಡೆದಾಗ ಸಲ್ಮಾನ್ ಖಾನ್ ಅವರು ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಯಾರೂ ಗಾಯಗೊಂಡಿರಲಿಲ್ಲ.

Leave a Reply

Your email address will not be published. Required fields are marked *

error: Content is protected !!