February 4, 2026

ವಿಟ್ಲ: ಕಡಂಬು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೆಂಕಿ: ಗಿಡ, ಮರಗಳು ಬೆಂಕಿಗಾಹುತಿ

0
image_editor_output_image-1545667664-1713259719283.jpg

ವಿಟ್ಲ: ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚುತ್ತಿದ್ದು, ಅರಣ್ಯ ಪ್ರದೇಶದಲ್ಲಿ ಆಗಾಗೆ ಬೆಂಕಿ ಕಾಣಿಸಿಕೊಳ್ಳುತ್ತಿವೆ.

ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲ ಕಸಬಾ ಗ್ರಾಮದ ಕಡಂಬು ಅನಿಲ ಕಟ್ಟೆ ಎಂಬಲ್ಲಿ ನಡೆದಿದೆ.

ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದು, ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದಂತೆ ಸ್ಥಳೀಯರು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಗಿಡಮರಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!