February 4, 2026

ಕೆ.ಎಸ್.ಈಶ್ವರಪ್ಪ ಯಾರು ಎನ್ನುವುದು ನನಗೆ ಗೊತ್ತಿಲ್ಲ ಎಂದ BJP ರಾಜ್ಯ ಚುನಾವಣಾ ಉಸ್ತುವಾರಿ

0
image_editor_output_image1640170741-1713336410245.jpg

ಬಾಗಲಕೋಟೆ: ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ ದಾಸ್‌ ಅಗರವಾಲ್ ಅವರು ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ, ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಯಾರು ಎನ್ನುವುದು ನನಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಅವರ ಈ ಹೇಳಿಕೆಗೆ ಬಿಜೆಪಿ ಓಬಿಸಿ ಘಟಕದ ಜಿಲ್ಲಾಧ್ಯಕ್ಷ ವೀರಣ್ಣ ಹಳೇಗೌಡರ ಅವರು ಪ್ರತಿಕ್ರಿಯಿಸಿ, ರಾಜ್ಯದ ಜನತೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಅಗರವಾಲ್ ಯಾರು ಎನ್ನುವುದು ಕೂಡ ಗೊತ್ತಿಲ್ಲ ಎಂದು ಭರ್ಜರಿ ತಿರುಗೇಟು ಕೊಟ್ಟಿದ್ದಾರೆ.

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ ದಾಸ್ ಅಗರವಾಲ್ ಅವರು, “ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ, ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಯಾರು ಎನ್ನುವುದು ನನಗೆ ಗೊತ್ತಿಲ್ಲ. ಗೊತ್ತಿಲ್ಲದ ವ್ಯಕ್ತಿಯ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!