ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನ
ಚೆನ್ನೈ: ಸೇನಾಪಡೆಗಳ (ಸಿಡಿಎಸ್) ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಊಟಿಯಲ್ಲಿ ಪತನಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಲಾಗಿದೆ. ಗಾಯಗೊಂಡ ಸೇನಾ ಹಿರಿಯ ಅಧಿಕಾರಿಗಳನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ ಗೆ ಕರೆದೊಯ್ಯಲಾಗಿದೆ ಎಂದು ವರದಿ ತಿಳಿಸಿದೆ.




