February 4, 2026

ಮಂಗಳೂರು: ಕಾರು ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು

0
image_editor_output_image668848294-1713338343724.jpg

ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಬಳಿ ನಡೆದಿದೆ.

ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‌ ಸವಾರ ಸಾವಿಯೊ ಮಹೇಶ್ ( 21) ಮೃತ ಬೈಕ್ ಸವಾರರಾಗಿದ್ದಾರೆ.

‘ಯುವಕರಿಬ್ಬರು ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಗೇಟ್ ಎದುರಿನ ತೆರೆದ ರಸ್ತೆ ವಿಭಜಕದ ಬಳಿ ಬೈಕಿನಲ್ಲಿ ‘ಯು ಟರ್ನ್ ತೆಗೆದು ಮುಂದೆ ಸಾಗುತ್ತಿದ್ದರು. ಅಷ್ಟರಲ್ಲಿ ಬಿ.ಸಿ.ರೋಡ್‌ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಅವರ ಬೈಕಿಗೆ ಡಿಕ್ಕಿ ಹೊಡೆದಿತ್ತು.

ಮಹೇಶ್ ಅವರ ಮೂಗು, ಎಡ ಕೈ, ಎಡ ಕಾಲಿನ ಗಂಟು ಹಾಗೂ ತಲೆಯ ಹಿಂಭಾಗಕ್ಕೆ ತೀವ್ರ ಸ್ವರೂಪದ ರಕ್ತ ಗಾಯಗಳಾಗಿ ಪ್ರಜ್ಞಾಹೀನರಾಗಿ ಬಿದ್ದಿದ್ದರು.

ಸ್ಥಳದಲ್ಲಿದ್ದವರು ಅವರನ್ನು ವಾಹನವೊಂದರಲ್ಲಿ ವೆನ್ಲಾಕ್‌ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಗಾಯಾಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!