May 29, 2024

ದುಬೈನಲ್ಲಿ ವರುಣನ ಅರ್ಭಟ- ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

0

ದುಬೈ: ಭಾರೀ ಮಳೆ ಮತ್ತು ಚಂಡಮಾರುತದಿಂದ ದುಬೈ ತತ್ತರಿಸಿದೆ.

ಮಳೆಯಿಂದಾಗಿ ಯುಎಇಯಾದ್ಯಂತ ವ್ಯಾಪಕವಾದ ಪ್ರವಾಹದ ಸ್ಥಿತಿ ಉಂಟಾಗಿದ್ದು ಭಾರತ ಮತ್ತು ಯುಎಇ ನಡುವಿನ 28 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಭಾರತೀಯ ವಾಯುಯಾನ ಅಧಿಕಾರಿಗಳು ದುಬೈಗೆ ಹೋಗುವ ಸುಮಾರು 15 ವಿಮಾನಗಳನ್ನು ರದ್ದುಗೊಳಿಸಿದ್ದಾರೆ, ಅದೇ ವೇಳೆ ಭಾರತಕ್ಕೆ ಬರಬೇಕಿದ್ದ 13 ವಿಮಾನಗಳನ್ನು ರದ್ದುಗೊಳಿಸಲಾಗಿದೆ.


1949 ರ ಬಳಿಕ ಇದೇ ಮೊದಲ ಬಾರಿಗೆ ಯುಎಇಯಲ್ಲಿ ದಾಖಲೆ ಪ್ರಮಾಣದ ಮಳೆ ಸುರಿದಿದೆ.ಪ್ರಮುಖ ಶಾಪಿಂಗ್ ಸೆಂಟರ್‌ಗಳಾದ ದುಬೈ ಮಾಲ್ ಮತ್ತು ಮಾಲ್ ಆಫ್ ಎಮಿರೇಟ್ಸ್ ಎರಡೂ ಪ್ರವಾಹಕ್ಕೆ ಸಿಲುಕಿದ್ದು, ಮೆಟ್ರೋ ನಿಲ್ದಾಣಗಳಿಗೂ ನೀರು ನುಗ್ಗಿದೆ.

Leave a Reply

Your email address will not be published. Required fields are marked *

error: Content is protected !!