May 6, 2026

ಮಡಿಕೇರಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು: ಇಬ್ಬರು ಆರೋಪಿಗಳ ಬಂಧನ

0
image_editor_output_image-1003620519-1713415194929.jpg

ಮಡಿಕೇರಿ: ಪಕ್ಕದ ಮನೆಯಲ್ಲಿ ಯಾರು ಇಲ್ಲದ ಸಂದರ್ಭವನ್ನು ಸಾಧಿಸಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದ ಮಿದ್‌ಲಾಜ್ (22) ಹಾಗೂ ಫಾತೀಮಾ (26) ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ ಮಡಿಕೇರಿ ತಾಲೂಕಿನ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಂಗೇರಿ ಗ್ರಾಮದ ನಿವಾಸಿ ಕೆ.ಹೆಚ್.ಜಲೀನಾ ಎಂಬವರು ಏ.12 ಮನೆಗೆ ಬೀಗ ಹಾಕಿಕೊಂಡು ಸಂಬಂಧಿಕರ ಮನೆಗೆ ತೆರಳಿ ಮರುದಿನ ಸಂಜೆ ಆಗಮಿಸಿದ ಸಂದರ್ಭ ಮನೆಯ ಹಿಂಬಾಗಿಲಿನ ಬಾಗಿಲು ಮುರಿದು ಒಳನುಗ್ಗಿ ಬೀರುವಿನಲ್ಲಿದ್ದ ಅಂದಾಜು 232 ಗ್ರಾಂ ಚಿನ್ನಾಭರಣ ಕಳ್ಳತನವಾಗಿರುವುದು ತಿಳಿದು ಬಂದಿತ್ತು.

ಈ ಸಂಬಂಧ ಭಾಗಮಂಡಲ ಠಾಣೆಯಲ್ಲಿ ಜಲೀನಾ ಪ್ರಕರಣ ದಾಖಲಿಸಿದ್ದರು. ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಸಾಕ್ಷ್ಯಾಧಾರ ಕಲೆಹಾಕಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.

Leave a Reply

Your email address will not be published. Required fields are marked *

error: Content is protected !!