ಆಶ್ರಮದ ನೀರಿನ ತೊಟ್ಟಿಯಲ್ಲಿ ತಾಯಿ-ಮಗಳ ಮೃತದೇಹ ಪತ್ತೆ
ಚಿತ್ರದುರ್ಗ: ಇಲ್ಲಿನ ಆಶ್ರಮದ ನೀರಿನ ತೊಟ್ಟಿಯಲ್ಲಿ ಬಿದ್ದು ತಾಯಿ-ಮಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.
ಚಿತ್ರದುರ್ಗದ ತುರುವನೂರು ರಸ್ತೆಯಲ್ಲಿನ ತಿಪ್ಪೇರುದ್ರಸ್ವಾಮಿ ಆಶ್ರಮದಲ್ಲಿ ಹಲವು ವರ್ಷಗಳಿಂದ ಈ ಆಶ್ರಮದ ಪೂಜಾರಿಯಾಗಿರುವ ಸುರೇಶ್ ಪತ್ನಿ ಗೀತಾ (42) ಹಾಗೂ ಪುತ್ರಿ ಪ್ರಿಯಾಂಕಾ (20) ಅವರ ಮೃತದೇಹಗಳು ಆಶ್ರಮದಲ್ಲಿರುವ ನೀರಿನ ತೊಟ್ಟಿಯಲ್ಲಿ ನಿನ್ನೆ (ಮಂಗಳವಾರ) ರಾತ್ರಿ ಪತ್ತೆಯಾಗಿವೆ. ನೋಡಲು ಸಹಜ ಸಾವಿನಂತೆ ಕಂಡುಬಂದರೂ ನಿಖರ ಕಾರಣ ತಿಳಿದುಬಂದಿಲ್ಲ.




