May 6, 2026

ಸ್ಕೂಟರ್‌ನ ಫುಟ್‌ರೆಸ್ಟ್ ಮೇಲೆ ಪುತ್ರನನ್ನು ನಿಲ್ಲಿಸಿ ಸವಾರಿ: ದಂಪತಿಯ ವಿರುದ್ಧ FIR ದಾಖಲು

0
image_editor_output_image-1756074174-1713428069251.jpg

ಬೆಂಗಳೂರು: ತಮ್ಮ ಮಗನ ಹುಟ್ಟುಹಬ್ಬದ ಆಸೆಯನ್ನು ಪೂರೈಸಲೆಂದು ಸ್ಕೂಟರ್‌ನ ಫುಟ್‌ರೆಸ್ಟ್ ಮೇಲೆ ಆತನನ್ನು ನಿಲ್ಲಿಸಿಕೊಂಡು ಸವಾರಿ ಮಾಡಿದ ಟೆಕ್ಕಿ ದಂಪತಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ದ್ವಿಚಕ್ರ ವಾಹನದ ಫುಟ್‌ರೆಸ್ಟ್‌ನಲ್ಲಿ ದಂಪತಿ ತಮ್ಮ ಮಗನನ್ನು ನಿಲ್ಲಿಸಿಕೊಂಡು ಸವಾರಿ ಮಾಡುತ್ತಿದ್ದಾಗ, ಪ್ರಯಾಣಿಕರೊಬ್ಬರು ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋ ವೈರಲ್ ಆದ ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ವಿಡಿಯೋ ಎರಡು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ದಂಪತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!