ಮುಂಬೈ: ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 40 BMW ಕಾರುಗಳು ಸುಟ್ಟು ಕರಕಲು
ಥಾಣೆ: ನವಿ ಮುಂಬೈನ ಟರ್ಭೆ ಎಂಐಡಿಸಿ ಪ್ರದೇಶದಲ್ಲಿನ ಶೋರೂಂ ಕಮ್ ಗೋಡೌನ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡ ದಲ್ಲಿ ಕನಿಷ್ಠ 40 ಬಿಎಂಡಬ್ಲ್ಯು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ಮುಂಜಾನೆ 5.30ರ ಸುಮಾರಿಗೆ ಬಿಎಂಡಬ್ಲ್ಯು ಕಾರುಗಳ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ನಿಲ್ಲಿಸಿದ್ದ ಕಾರುಗಳು ಸುಟ್ಟು ಕರಕಲಾಗಿವೆ ಎಂದು ಎಂಐಡಿಸಿ ಅಗ್ನಿಶಾಮಕ ಸೇವೆಗಳ ಮುಖ್ಯ ಅಧಿಕಾರಿ ಆರ್.ಬಿ.ಪಾಟೀಲ್ ತಿಳಿಸಿದ್ದಾರೆ.
ಹತ್ತು ಅಗ್ನಿಶಾಮಕ ವಾಹನಗಳ ಮೂಲಕ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಹತೋಟಿಗೆ ಬಂದ ಬೆಂಕಿಯಲ್ಲಿ ಕನಿಷ್ಠ 40-45 ಬಿಎಂಡಬ್ಲ್ಯು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ಅವರು ತಿಳಿಸಿದ್ದಾರೆ.




