ಉಡುಪಿ: ನೀರಿಗಿಳಿದ ಮೂವರು ಪ್ರವಾಸಿಗರರ ಪೈಕಿ ಓರ್ವ ಸಾವು
ಉಡುಪಿ: ನೀರಿಗಿಳಿದ ಮೂರು ಪ್ರವಾಸಿಗರರು ಸಮುದ್ರಪಾಲಾದ ಘಟನೆ ಉಡುಪಿಯ ಮಲ್ಪೆ ಬೀಚ್‌ನಲ್ಲಿ ಸಂಭವಿಸಿದೆ. ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂವರ ಪೈಕಿ ಓರ್ವ ಸಾವನ್ನಪ್ಪಿದರೆ ಮತ್ತಿಬ್ಬರನ್ನು ರಕ್ಷಿಸಲಾಗಿದೆ.
ಮೃತರನ್ನು ಹಾಸನ ಜಿಲ್ಲೆಯ ದಾಬೆಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಸಂತೋಷ್ ಹಾಗೂ ಮತ್ತೊಬ್ಬರನ್ನು ರಕ್ಷಿಸಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾಬೆ ಬೇಲೂರಿನಿಂದ 20 ಜನರು ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರಕ್ಕಿಳಿದು ಸ್ನಾನ ಮಾಡುತ್ತಿದ್ದಾಗ ಮೂವರು ಅಲೆಗಳ ಸೆಳೆತಕ್ಕೆ ಕೊಚ್ಚಿಹೋಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಮೂವರನ್ನು ರಕ್ಷಿಸಿ, ದಡಕ್ಕೆ ತಂದಿದ್ದಾರೆ.




