May 6, 2026

ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಎಡವಟ್ಟು

0
image_editor_output_image-692838752-1713507530922.jpg

ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ.

ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.

ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!