March 17, 2026

ಉಳ್ಳಾಲ: ರಸ್ತೆಬದಿಯಲ್ಲಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಬೆಂಕಿಗೆ ಆಹುತಿ

0
image_editor_output_image-1954731420-1713516245026.jpg

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ.

ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Leave a Reply

Your email address will not be published. Required fields are marked *

You may have missed

error: Content is protected !!