March 17, 2026

ಸುರತ್ಕಲ್: ಕಾರು ಅಪಘಾತ: ಚಾಲಕ ಮೃತ್ಯು

0
image_editor_output_image-100567316-1713586192113

ಸುರತ್ಕಲ್: ಕಾರೊಂದು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮಳೆಯಾಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿ ಭಾಗಕ್ಕೆ ಸಂಚರಿಸುತ್ತಿದ್ದ ಕಾರು ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೆಡ್ ಗೆ ಡಿಕ್ಕಿಹೊಡೆದು ಹಲವು ಬಾರಿ ಪಲ್ಟಿಯಾಗಿ ಹೆದ್ದಾರಿ ಪಕ್ಕದ ದಾರಿ ದೀಪದ ಬೃಹತ್ ಕಂಬಕ್ಕೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಯ ಬದಿಯಲ್ಲಿ ನಿಂತಿದೆ.

ಗಂಭೀರವಾಗಿ ಗಾಯಗಳಾಗಿದ್ದ ಚಾಲಕನನ್ನಯ ಸಾರ್ವಜನಿಕರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದಾಗಲೇ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ಹೈವೇ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


Leave a Reply

Your email address will not be published. Required fields are marked *

You may have missed

error: Content is protected !!