May 6, 2026

ನೇಹಾ ಹತ್ಯೆ ಆರೋಪಿಯ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ : ಅಂಜುಮನ್ ಸಂಸ್ಥೆ ಘೋಷಣೆ..!

0
image_editor_output_image915887075-1713587524394

ಹುಬ್ಭಳ್ಳಿ: ನೇಹಾ ಹತ್ಯೆಗೆ ನಾಡಿನಾದ್ಯಾಂತ ಖಂಡನೆಗಳು ವ್ಯಕ್ತವಾಗುತ್ತಿದ್ದು,  ಆರೋಪಿ ಫಯಾಜ್ ನನ್ನು ನಮ್ಮ ಕೈಗೆ ಕೊಡಿ ಅವನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ ಎಂದು ಅಂಜುಮಾನ್ ಸಂಸ್ಥೆ ಗುಡುಗಿದೆ.

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆಗೈದ ಆರೋಪಿ ಫಯಾಜ್ನನ್ನು ಎನ್ ಕೌಂಟರ್ ಮಾಡುವಂತೆ ಆಗ್ರಹಗಳು ಹೆಚ್ಚಾಗುತ್ತಿದ್ದು, ರಾಜ್ಯಾದ್ಯಾಂತ ಆಕ್ರೋಶ, ಪ್ರತಿಭಟನೆಗಳು ನಡೆಯುತ್ತಿವೆ.  ಇಂತಹ ರಕ್ಕಸರನ್ನು ನೇರವಾಗಿ ನೇಣಿಗೆ ಹಾಕುವ ಕಾನೂನು ಜಾರಿಗೆ ತರಬೇಕೆಂಬ ಕೂಗುಗಳು ಕೇಳಿ ಬರುತ್ತಿವೆ. ಇನ್ನು ಈ ಘಟನೆಯನ್ನು ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ತೀವ್ರವಾಗಿ ಖಂಡಿಸಿದ್ದು ಆರೋಪಿಯನ್ನು ಎನ್‌ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಅಂಜುಮನ್ ಸಂಸ್ಥೆ ಮುಖ್ಯಸ್ಥ ಅಲ್ತಾಫ್, ನೇಹಾ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಆರೋಪಿ ಫಯಾಜ್ ನನ್ನು ನಮ್ಮ ಕೈಗೆ ಕೊಡಿ ಅವನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ. ಫಯಾ‌ಜ್‌ನನ್ನು ಎನ್‌ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ. ಭಾರತೀಯ ಜನತಾ ಪಕ್ಷದವರು ಇದರಲ್ಲಿ ರಾಜಕೀಯ ಮಾಡಬಾರದು. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದೇವೆ. ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ನಲ್ಲಿ ಆರೋಪಿ ಎನ್ಕೌಂಟರ್ ಮಾಡಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!