March 17, 2026

ಉಪ್ಪಿನಂಗಡಿ: 13 ವರ್ಷದ ಬಾಲಕ ನೇಣು ಬಿಗಿದು ಆತ್ಮಹತ್ಯೆ: ಸೈಕಲ್ ರಿಪೇರಿ ಮಾಡುವ ವಿಚಾರದಲ್ಲಿ ನೊಂದು ಕೃತ್ಯ

0
image_editor_output_image833934401-1713590263450

ಉಪ್ಪಿನಂಗಡಿ : ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ.

ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾದ ನಂದನ್ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು, ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ., ನಂದನ್ ಏಳನೇ ತರಗತಿ ಉತ್ತೀರ್ಣನಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆಹೊಂದಿದ್ದರು.

ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ನಂದನ್ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದರು.

ಮನೆಯ ಇನ್ವರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ತಿಳಿಸಿದ್ದರೆನ್ನಲಾಗಿದೆ. ಇದರಿಂದ ಮನನೊಂದ ಆತ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿಕೊಂಡು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!