ನದಿಯಲ್ಲಿ ದೋಣಿ ಮಗುಚಿ ಇಬ್ಬರು ಸಾವು: ಎಂಟು ಮಂದಿ ನಾಪತ್ತೆ
ಜಾರ್ಸುಗು: ದೋಣಿಯೊಂದು ಮಗುಚಿದ ಪರಿಣಾಮ ಇಬ್ಬರು ಸಾವನ್ನಪ್ಪಿ, ಎಂಟು ಮಂದಿ ನಾಪತ್ತೆಯಾದ ಘಟನೆ ಒಡಿಶಾ ರಾಜ್ಯದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿಯಲ್ಲಿ ಈ ಘಟನೆ ನಡೆದಿದೆ.
ಸ್ಥಳೀಯ ಮೀನುಗಾರರು 35 ಪ್ರಯಾಣಿಕರನ್ನು ರಕ್ಷಿಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ ಎಂದು ವರದಿಯಾಗಿದೆ.
ದೋಣಿಯು ಪಥರ್ಸೇನಿ ಕುಡಾದಿಂದ ಬರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಅಹಿತಕರ ಘಟನೆ ಸಂಭವಿಸಿದೆ.





