ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಕಡಬ ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ
ಮಂಗಳೂರು : ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಂತ್ರಸ್ಥೆ ವಿದ್ಯಾರ್ಥಿ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾಳೆ.
ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಆರೋಪಿ ಅಬಿನ್ ಎಂಬಾತ ಆ್ಯಸಿಡ್ ದಾಳಿ ನಡೆಸಿದ್ದ.
ಇದರಿಂದ ಇಬ್ಬರು ಸಹಪಾಠಿ ಸೇರಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಸಂತ್ರಸ್ಥೆ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದರಿಂದ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಇನ್ನೂ ಕೂಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.





