ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ: ಪದ್ಮರಾಜ್ ಪೂಜಾರಿ ಆರೋಪ
ಸುಳ್ಯ: ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿದಿರುವುದರಿಂದ ವಿರೋಧಿಗಳು ಅಪಪ್ರಚಾರದಲ್ಲಿ ತೊಡಗಿದ್ದು ಕಾಂಗ್ರೇಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೆ ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಸಲಹೆ ನೀಡಿದರು.
ಸಂಪಾಜೆಯಿಂದ ಕಲ್ಲುಗುಂಡಿವರೆಗೆ ನಡೆದ ರೋಡ್ ಶೋ ಬಳಿಕ ಪ್ರಚಾರ ಸಭೆಯಲ್ಲಿ ಮಾತನಾಡಿದರು.




