ಬಿಜೆಪಿ ಪರ ಮತಯಾಚನೆ ಮಾಡಿದ್ದಕ್ಕೆ ವ್ಯಕ್ತಿಗೆ ತಂಡದಿಂದ ಹಲ್ಲೆ
ರಾಮನಗರ: ಲೋಕಸಭೆ ಚುನಾವಣೆಗೆ ಬಿಜೆಪಿ ಪರ ಮತಯಾಚನೆ ಮಾಡಿದ್ದಕ್ಕೆ ರಾಮನಗರ ಜಿಲ್ಲೆ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗಿರಿಗೌಡನ ದೊಡ್ಡಿಯಲ್ಲಿ ಮಹಾದೇವ್ (32) ಎಂಬುವರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಬಿಜೆಪಿ ಪರ ಮತಯಾಚನೆ ಮಾಡಿದ್ದಕ್ಕೆ ಮಹಾದೇವ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಅವರ ಕುಟುಂಬದವರು ಆರೋಪಿಸಿದ್ದಾರೆ. ಶುಕ್ರವಾರ ರಾತ್ರಿ ಮಹಾದೇವ್ ಅವರನ್ನು ಗುಂಪೊಂದು ಥಳಿಸುತ್ತಿರುವ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ.