ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ : ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ಕೇರಳದ ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ವಿಜೇಶ್ ಯಾನೆ ಮೋಹನ್ ಆತ್ಮಹತ್ಯೆಗೆ ಶರಣಾದವರು. ಏ. 19 ರಾತ್ರಿಯಿಂದ ಏ.20ರ ಬೆಳಗ್ಗಿನ ಮಧ್ಯಾವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ.
ವಿಜೇಶ್ ಮಾಳದಲ್ಲಿ ವಾಸಿಸುತ್ತಿದ್ದು ಶೇಂದಿ ವ್ಯಾಪಾರ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದಿಲ್ಲ. ಕಾರ್ಕಳ ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ